ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಸ್ನೇಹಿತನ ಮದುವೆ ಸಂಭ್ರಮದಲ್ಲಿ ಭಾಗಿಯಾಗಲು ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಮೂಲದ ಅಭಿಷೇಕ್ (27) ಮೃತಪಟ್ಟ ದುರ್ದೈವಿ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಮೃತ ಅಭಿಷೇಕ್ ತನ್ನ ಸ್ನೇಹಿತನ ಮದುವೆಗಾಗಿ ಎನ್. ಆರ್. ಪುರ ತಾಲೂಕಿನ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಇಲ್ಲಿನ ಭದ್ರಾ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಭಾನುವಾರ ಸಂಜೆ ಈಜಲು ಅಥವಾ ನೀರಿಗಿಳಿದಾಗ ಆಕಸ್ಮಿಕವಾಗಿ ನದಿಯ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಳೆಹೊನ್ನೂರು ಪೊಲೀಸರು ಮತ್ತು ಸ್ಥಳೀಯರು ಸಂಜೆಯೇ ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ಕತ್ತಲಾದ ಕಾರಣ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ನಿನ್ನೆ ಬೆಳಿಗ್ಗೆಯಿಂದ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜು ತಜ್ಞರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಕೊನೆಗೂ ಅಭಿಷೇಕ್ ಅವರ ಮೃತದೇಹವನ್ನು ಪತ್ತೆಹಚ್ಚಿ ಮೃತದೇಹವನ್ನು ಮೇಲೆತ್ತಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












