
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ಭಾನುವಾರ ನಡೆದಿದೆ. ರಂಜಿತಾ (20) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಯುವತಿ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು ಹಾಂದಿ ಹೆಸಗಲ್ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮುಳುಗು ತಜ್ಞರಾದ ರಾಕೇಶ್, ಅಭಿಲಾಶ್ ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ.

ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?
ಇನ್ನು ಮೃತ ಯುವತಿಯ ತಂದೆ ಶೇಖರ್ ನಾಯಕ್ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
















