ರಾಜ್ಯ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ನಾಲ್ವರು ಎಂಎಲ್ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ.
ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು, ಮಾಜಿ ಎಂಎಲ್ಸಿ ರಮೇಶ್ ಬಾಬು ಹಾಗೂ ಎನ್ಆರ್ಐ ಅಧ್ಯಕ್ಷೆಯಾಗಿರುವ ಆರತಿ ಕೃಷ್ಣ ಹೆಸರುಗಳು ಹೈಕಮಾಂಡ್ ಕಡೆಯಿಂದ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರೊಂದಿಗೆ ವಿಧಾನ ಪರಿಷತ್ನ ನಾಮನಿರ್ದೇಶನ ಸ್ಥಾನ ಭರ್ತಿ ವಿಚಾರವಾಗಿ ಸಾಕಷ್ಟು ಚರ್ಚೆಯ ಬಳಿಕ ಈ ನಾಲ್ಕು ಹೆಸರುಗಳು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ.
ಆರತಿ ಕೃಷ್ಣ ಅವರ ಹೆಸರನ್ನು ಶಿಫಾರಸ್ಸು:
ಎಂ ಎಲ್ ಸಿ ಸ್ಥಾನಕ್ಕೆ ಆರತಿ ಕೃಷ್ಣ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆಯವರಾದ ಆರತಿ ಕೃಷ್ಣ ಅವರು, ಇವರ ತಂದೆ ಬೇಗಾನೆ ರಾಮಯ್ಯ ಅವರು ಈ ಹಿಂದೆ ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದರು. ಇದೀಗ ಆರತಿ ಕೃಷ್ಣ ಅವರ ಹೆಸರು ಎಂಎಲ್ ಸಿ ಸ್ಥಾನಕ್ಕೆ ಶಿಫಾರಸ್ಸು ಮಾಡಿದ್ದು, ಸಿಎಂ ಕಚೇರಿಯಿಂದ ರಾಜ ಭವನಕ್ಕೆ ಅಭ್ಯರ್ಥಿಗಳ ಪಟ್ಟಿ ರವಾನೆ ಮಾಡಲಾಗಿದ್ದು, ಅಧಿಕೃತ ಘೋಷಣೆ ಬಾಕಿ ಮಾತ್ರ ಇದೆ.












