
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರು ದಾಳಿ ನಡೆಸಿದ ಸಂದರ್ಭದಲ್ಲಿ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಮೊಬೈಲ್ ಮೂಲಕ ಮಹಿಳಾ ಅಧಿಕಾರಿ ವಿರುದ್ಧ ಅಶ್ಲೀಲ ಪದ ಬಳಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಮಹಿಳಾ ಅಧಿಕಾರಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲಿದ್ದ ವ್ಯಕ್ತಿಯೊಬ್ಬ ಯಾರಿಗೋ ಫೋನ್ ಮಾಡಿ ನಡೆದಿರುವ ಘಟನೆ ವಿವರಿಸುತ್ತಾನೆ. ಅತ್ತ ಕಡೆಯಿಂದ ಮಾತನಾಡುತ್ತಿದ್ದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅಧಿಕಾರಿಗೆ ಫೋನ್ ಕೊಡು ಎನ್ನುತ್ತಾನೆ. ಆದರೆ, ಮಹಿಳಾ ಅಧಿಕಾರಿ ನನ್ನ ಫೋನ್‌ಗೆ ಕರೆ ಮಾಡಲು ತಿಳಿಸಿ ಎಂದು ಮಾತನಾಡಲು ನಿರಾಕರಿಸುತ್ತಾರೆ. ಆಗ ಸ್ಥಳದಲ್ಲಿದ್ದ ವ್ಯಕ್ತಿ ಸ್ಪೀಕರ್ ಆನ್ ಮಾಡುತ್ತಾನೆ. ಅತ್ತ ಕಡೆಯಿಂದ ಅಶ್ಲೀಲ ಪದ ಬಳಸಿ ಮಹಿಳಾ ಅಧಿಕಾರಿಯನ್ನು ಬೈಯ್ಯಲಾಗುತ್ತದೆ. ಅಧಿಕಾರಿ ಪ್ರತಿರೋಧ ತೋರಿದರೂ ಅಶ್ಲೀಲ ಪದ ಬಳಕೆ ಮುಂದುವರಿಯುತ್ತದೆ.

ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?
ಇನ್ನು ಈ ವಿಡಿಯೋ ಕೆಆರ್‌ಎಸ್ ಪಕ್ಷದ ರವಿ ಕೃಷ್ಣಾ ರೆಡ್ಡಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪೊಲೀಸರು ಶಾಸಕರ ಪುತ್ರನ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮಹಿಳಾ ಅಧಿಕಾರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ್ದಾರೆ.













