ಕಡೂರು: (ನ್ಯೂಸ್ ಮಲ್ನಾಡ್ ವರದಿ) ಜೀಪ್ ಹಾಗೂ ಬೈಕಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಸಖರಾಯಪಟ್ಟಣ ಸಮೀಪದ ಸರಪನಹಳ್ಳಿ ಜಿ.ಮದನ್ (25) ಮೃತ ದುರ್ದೈವಿ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಹಿರೇಗೌಜ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಜೀಪ್ ತಿರುಗುವ ವೇಳೆ ಚಿಕ್ಕಮಗಳೂರಿನ ಕಡೆಯಿಂದ ಮೆಕ್ಯಾನಿಕ್ ಕೆಲಸ ಮುಗಿಸಿಕೊಂಡು ಬರುತ್ತಿದ್ದ ಮದನ್ ಎಂಬಾತನ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












