
ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 13 ಜನರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಮೃತರು ಹೊಸದುರ್ಗ ತಾಲೂಕಿನ ಮಾಳಿಗೆಹಟ್ಟಿ ಗ್ರಾಮಸ್ಥರಾದ ಮಂಜುನಾಥ್ (34) ಮತ್ತು ಹೊಳಿಯಪ್ಪ (48) ಎಂದು ತಿಳಿದು ಬಂದಿದೆ. ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಹೊಳಿಯಪ್ಪ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟಿದ್ದಾರೆ.

3 ಟ್ರ್ಯಾಕ್ಟರ್ಗಳಲ್ಲಿ ಕಲ್ಲತ್ತಿಗಿರಿದೇಗುಲಕ್ಕೆ ಬಂದಿದ್ದ ಗ್ರಾಮಸ್ಥರು, ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.














