
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಬವಿಸಿ ಬೈಕ್ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ಬೆಳಿಗ್ಗೆ ತೀರ್ಥಹಳ್ಳಿಯ ತುಂಗಾ ಕಾಲೇಜು ಬಳಿ ನಡೆದಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ

ಶಿವಮೊಗ್ಗದಿಂದ ದಾವಣಗೆರೆಯ ಹೊನ್ನಾಳಿಯ ಶಾಲಾ ಪ್ರವಾಸದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ಗೆ ಸ್ಥಳೀಯ ಬಾನುಗೋಡಿನ ನಿವಾಸಿಯ ಬೈಕ್ ಎದುರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಬಸ್ಸಿನ ಕೆಳಗೆ ನುಗ್ಗಿದ್ದು, ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಗಮನಕ್ಕೆ; ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ
















