ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ. ಕಾರ್ಕಳ ಮೂಲದ ಲಾವಣ್ಯ(25) ಮೃತ ವಿದ್ಯಾರ್ಥಿನಿ.
ಇದನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ

ಅಂತಿಮ ವರ್ಷದ ಪಿಡಿಯಾಟ್ರಿಕ್ ಪಿಜಿ ವಿದ್ಯಾರ್ಥಿನಿಯಾಗಿದ್ದ ಲಾವಣ್ಯ ಸ್ನೇಹಿತೆಯ ಜೊತೆ ಆಸ್ಪತ್ರೆಯಿಂದ ಹಾಸ್ಟೆಲ್ಗೆ ಹೋಗುವಾಗ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಕೆ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದೆ. ಪರಿಣಾಮ ಲಾವಣ್ಯ ಮೃತಪಟ್ಟಿದ್ದು, ದ್ವಿಚಕ್ರ ವಾಹನದಲ್ಲಿದ್ದ ಮತ್ತೊಬ್ಬಳು ವಿದ್ಯಾರ್ಥಿನಿ ಬೆಂಗಳೂರು ಜೆ.ಪಿ.ನಗರ ಮೂಲದ ಓವೇರಿಯಾ ಅವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ















