ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶೃಂಗೇರಿ ತಾಲೂಕಿನ ಶಿಡ್ಲೆ ಗ್ರಾಮದ ‘ಪಂಚವಟಿ’ ಹೋಮ್ ಸ್ಟೇನಲ್ಲಿ ನಿನ್ನೆ ನಡೆದಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಹೋಮ್ ಸ್ಟೇನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಈ ಬೆಂಕಿಯಿಂದಾಗಿ ಹೋಮ್ ಸ್ಟೇನ ಕೆಲವು ಪೀಠೋಪಕರಣಗಳು ಹಾಗೂ ಬೆಲೆಬಾಳುವ ವಸ್ತುಗಳು ಹಾನಿಗೊಳಗಾಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












