ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನಕುಮಾರ್ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಇರುವ ಬಾಡಿಗೆ ಮನೆ, ಕಲ್ಯಾಣ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆ ಮತ್ತು ಕಡೂರಿನಲ್ಲಿ ಸಹೋದರಿ ಮನೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಮನೆಯಲ್ಲಿ ವಸ್ತುಗಳ ಮೌಲ್ಯ, ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ನಿರ್ಮಾಣ ಹಂತದ ಮನೆಗೆ ಬಳಸಿರುವ ಸಾಮಗ್ರಿಗಳು, ಮರ ಸೇರಿ ಸಾಮಗ್ರಿಗಳ ಮೌಲ್ಯ ಅಂದಾಜು ಮಾಡುತ್ತಿದ್ದಾರೆ.












