ಚಿಕ್ಕಮಗಳೂರು: ಪೋಕ್ಸೋ ಪ್ರಕರಣದ ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು ದಂಡ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು 7 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್‌ ಮಾಡ್ದೆ ಈ ಸುದ್ದಿ ಓದಿ

ನರಿಗುಡ್ಡೆ ಗ್ರಾಮ ನಿವಾಸಿಯಾದ ಮೂರ್ತಿ (45) ಎಂಬಾತನು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು ಎಂಬ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ.-1 ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.25,000 ದಂಡ ವಿಧಿಸಿದೆ. ಜೊತೆಗೆ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011 ಅಡಿಯಲ್ಲಿ ನೊಂದ ಬಾಲಕಿಗೆ ರೂ.1,00,000 ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ

ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿಯನ್ನು ಆಲ್ದೂರು ವೃತ್ತ ನಿರೀಕ್ಷಕರಾದ ಸೋಮೇಗೌಡ ಪಿ.ಪಿ. ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಭರತ್ ಕುಮಾರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಪೊಲೀಸ್ ಸಿಬ್ಬಂದಿಗಳಾದ ಸಿ.ಹೆಚ್.ಸಿ. ಆಶೋಕ್ ಕೆ.ಎಂ. ಅವರು ತನಿಖಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದು, ಎ.ಎಸ್.ಐ. ಸುಬ್ರಮಣಿ ಹಾಗೂ ಸಿ.ಪಿ.ಸಿ. ಚಿದಾನಂದ ಕೆ.ಡಿ. ಅವರು ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದರು. ಜೊತೆಗೆ ಸಿ.ಪಿ.ಸಿ. ಹರ್ಷ ಎಂ.ವಿ. ಅವರು ಪ್ರೋಸೆಸ್ ಕರ್ತವ್ಯ ನಿರ್ವಹಿಸಿದ್ದರು.

ನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.