ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಸಹೋದರನ ಅತ್ತೆಯ ಕೊಲೆ ಮಾಡಿದ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತಿ ಬೈಲ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ

ಏನಿದು ಘಟನೆ:
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಣತಿ ಗ್ರಾಮದ ಯಮುನಾ ಎನ್ನುವವರು ಆರು ತಿಂಗಳಿನಿಂದ ಪುತ್ರಿಯ ಮನೆ ಭಾರತಿ ಬೈಲ್ ಗ್ರಾಮಕ್ಕೆ ಬಂದು ನೆಲೆಸಿದ್ದರು. ಭಾನುವಾರ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮಗಳ ಮನೆಗೆ ಬಂದಿದ್ದರು. ಆಗ ಮನೆಯಲ್ಲಿ ಕುಡಿದು ಜಗಳವಾಡುತ್ತಿದ್ದ ಮಗಳ ಗಂಡನ ಅಣ್ಣ ಶಶಿಧರ ಪೂಜಾರಿಗೆ ಯಮುನಾ ಬುದ್ದಿವಾದ ಹೇಳಿದ್ದಾರೆ.

ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇದೇ ಕಾರಣಕ್ಕೆ ಶಶಿಧರ ಪೂಜಾರಿ ಸುತ್ತಿಗೆಯಿಂದ ಯಮುನಾ ಅವರ ತಲೆಗೆ ಹೊಡೆದಿದ್ದಾನೆ. ಯಮುನಾ ಸ್ಥಳದಲ್ಲಿ ಕುಸಿದು ಸಾವನ್ನಪ್ಪಿದ್ದಾರೆ. ಬಳಿಕ ತಲೆ ಮರೆಸಿಕೊಂಡಿದ್ದ ಶಶಿಧರ ಪೂಜಾರಿ ಇದೀಗ ಭಾರತಿ ಬೈಲು ಕಾಫಿ ತೋಟ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಒಂದೇ ಚಾರ್ಜ್‌ನಲ್ಲಿ 320 ಕಿ.ಮೀ. ಪ್ರಯಾಣ; ಮತ್ತೊಂದು ಹೊಸ ಸ್ಕೂಟರ್ ಅನಾವರಣ















