ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಸಸ್ಪೆಂಡ್ ಆಗಿದ್ದ ಆರೋಪಿ ಶಿಕ್ಷಕನನ್ನು ಶೃಂಗೇರಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಡಘಟ್ಟಕ್ಕೆ ನಿಯೋಜನೆ ಮಾಡಲಾಗಿದೆ. ಇದರಿಂದ ಸಾಮೂಹಿಕವಾಗಿ ಟಿ.ಸಿ ಹಿಂಪಡೆಯುವ ಎಚ್ಚರಿಕೆಯನ್ನು ಪೋಷಕರು ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್ ತಿಳಿಸಿದ್ದಾರೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ತರೀಕೆರೆ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಸವನಹಳ್ಳಿಯಲ್ಲಿ ಸಿದ್ದರಾಮಪ್ಪ ಹೆಚ್ ಶಿಕ್ಷಕನಾಗಿದ್ದಾಗ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಸ್ಪೆಂಡ್ ಆಗಿದ್ದ ಆರೋಪವಿದೆ. ಇದೆ ಶಿಕ್ಷಕನನ್ನು ಇದೀಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಡಘಟ್ಟಕ್ಕೆ ನಿಯೋಜನೆ ಮಾಡಲಾಗಿದೆ. ಹೀಗಾಗಿ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಸಾಮೂಹಿಕವಾಗಿ ಟಿ.ಸಿ ಹಿಂಪಡೆಯುವುದಾಗಿ ಎಚ್ಚರಿಕೆಯನ್ನ ನೀಡಿದ್ದಾರೆ.
“ತರೀಕೆರೆಯ ಬಸವನಹಳ್ಳಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಹ್ಯ ರೀತಿಯಲ್ಲಿ ವರ್ತಿಸಿದ ಆರೋಪ ಹೊತ್ತಿದ್ದರು. ಇದೇ ಶಿಕ್ಷಕನನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದಿರುವ ಗಂಡಘಟ್ಟ ಶಾಲೆಗೆ ನಿಯೋಜನೆ ಮಾಡಿರುವುದು ಸರಿಯಲ್ಲ. ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು”– ಪ್ರಶಾಂತ್, ಗ್ರಾಮ ಪಂಚಾಯಿತಿ ಸದಸ್ಯ
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












