ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ಎರಚಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ಸುಂದರ್ ರಾಜ್ ಎಂಬುವರ ಮೇಲೆ ಪಕ್ಕದ ಮನೆ ಜೇಮ್ಸ್ ಆಸಿಡ್ ದಾಳಿ ಮಾಡಿರುವ ವ್ಯಕ್ತಿ.
ಇದನ್ನೂ ಓದಿ; ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ

ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರ ನಾಯಿಗೆ ಬೈದಿದ್ದಾನೆ, ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಪಕ್ಕದ ಮನೆ ವ್ಯಕ್ತಿ ಜೇಮ್ಸ್ ಆಸಿಡ್ ದಾಳಿ ಮಾಡಿದ್ದಾನೆ. ಆಸಿಡ್ ದಾಳಿಗೊಳಗಾದ ಸುಂದರರಾಜ್ ಪರಿಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಡಗಣ್ಣಿಗೆ ಗಂಭೀರ ಗಾಯವಾಗಿ, ಕಣ್ಣಿನ ಪದರ ಬದಲಿಸುವಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ವೈದ್ಯರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ; 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
ನಾಯಿ ಹೆಸರಿನಲ್ಲಿ ಜೇಮ್ಸ್ ಗೆ ಮಾಲೀಕ ಬೈಯುತ್ತಿದ್ದ ಎನ್ನಲಾಗಿದ್ದು ಇದರಿಂದ ಸಿಟ್ಟಿಗೆದ್ದು ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ. ಜೇಮ್ಸ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಪೊಲೀಸ್ ವರ್ಸಸ್ ಲಾಯರ್ ಪ್ರಕರಣ | ವಕೀಲರ ವಿರುದ್ಧ 4 ಎಫ್ಐಆರ್ ದಾಖಲು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಯುವ ವಕೀಲ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ, ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು. ಇದೀಗ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ ಐಆರ್ ದಾಖಲಾಗಿದೆ.
ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
ಏನಿದು ಪ್ರಕರಣ:
ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ಧರಿಸದ ಕಾರಣಕ್ಕೆ ಪೊಲೀಸರು ವಕೀಲರೊಬ್ಬರನ್ನು ಥಳಿಸಿದ್ದರು. ಈ ಕ್ರಮ ಖಂಡಿಸಿ ವಕೀಲರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹೈಕೋರ್ಟ್ ಕಲಾಪ ಬಹಿಷ್ಕಾರಕ್ಕೂ ಮುಂದಾಗಿದ್ದರು. ಹೈಕೋರ್ಟ್ ಸಿಜೆ, ವಕೀಲರನ್ನು ಮನವೊಲಿಸಿದ್ದು, ಕಲಾಪ ಬಹಿಷ್ಕರಿಸುವುದು ಸರಿಯಲ್ಲ ಎಂಬುದಾಗಿ ಹೇಳುವ ಮೂಲಕ, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ 6 ಪೊಲೀಸರ ವಿರುದ್ಧ ಎಫ್ ಐಆರ್ ದಾಖಲಾಗಿ ಆ ಬಳಿಕ ಅವರನ್ನು ಅಮಾನತು ಕೂಡ ಮಾಡಿದ್ದರು.
ಇದನ್ನೂ ಓದಿ; ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ
ರಾತ್ರೋ ರಾತ್ರಿ ಪೊಲೀಸರಿಂದಲೂ ಪ್ರತಿಭಟನೆ:
ಪೊಲೀಸರನ್ನು ಅಮಾನತುಗೊಳಿಸಿದ ಕ್ರಮ ಖಂಡಿಸಿ ರಾತ್ರೋ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಹನುಮಂತಪ್ಪ ಸರ್ಕಲ್ ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಹಲ್ಲೆ ನಡೆಸಿದವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಈ ಪ್ರತಿಭಟನಾಕಾರರನ್ನು ಮನವೊಲಿಸಿದ ಎಸ್ ಪಿ, ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಹೀಗಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು.
15 ಮಂದಿ ವಕೀಲರ ವಿರುದ್ಧ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು:
ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ಮಂದಿ ವಕೀಲರ ವಿರುದ್ಧ ಸೆಕ್ಷನ್ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.












