ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಒಳಗೊಂಡಂತೆ ಕೊಡಗು, ಹಾಸನ ಭಾಗದಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಬಾಳೆಹೊನ್ನೂರಿನ ಮಾತನಾಡಿದ ಅವರು, ರಾಜ್ಯದ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುತ್ತದೆ. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದ್ದು, ಕರ್ನಾಟಕದಲ್ಲಿ 6395 ಆನೆಗಳಿದೆ. ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದರು.
2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ:
ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದರ ಜೊತೆಗೆ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.
ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!












