ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾವೇರಿಗೆ ನಾವು ಪ್ರಾಣ ಕೊಡೋಕೆ ಸಿದ್ಧ’ ಅಂತ ಅನೇಕರ ಬಾಯಲ್ಲಿ ಕೇಳುತ್ತಿರುತ್ತೇವೆ. ಈಗ ‘ನೆನಪಿರಲಿ’ ಪ್ರೇಮ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಇದನ್ನೂ ಓದಿ; ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ

ಹೌದು, ಸೋಶಿಯಲ್ ಮೀಡಿಯಾದಲ್ಲಿ ರಕ್ತದಲ್ಲಿ ಪತ್ರ ಬರೆದಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. “ಕಾವೇರಿ, ಕರ್ನಾಟಕಕ್ಕೆ ದಯವಿಟ್ಟು ನ್ಯಾಯ ಕೊಡಿ. ಕಾವೇರಿ ನಮ್ಮದು” ಎಂದು ಅವರು ರಕ್ತದಲ್ಲಿ ಪತ್ರ ಬರೆದಿದ್ದು, ಆ ಪತ್ರದಲ್ಲಿ ಅವರ ಹಸ್ತದ ಅಚ್ಚನ್ನು ರಕ್ತದಲ್ಲಿ ನಮೂದಿಸಿದ್ದಾರೆ.
ಹೈ ವೋಲ್ವೇಜ್ ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಮರ
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಹೈ ವೋಲ್ವೇಜ್ ವಿದ್ಯುತ್ ತಂತಿತಾಗಿ ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಬೆಂಕಿ ಹತ್ತಿ ಧಗಧಗ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು ಭಾಗದಲ್ಲಿ ಭಾರೀ ಮಳೆ ಜೊತೆ ರಣಗಾಳಿ ಬೀಸುತ್ತಿದೆ. ಇನ್ನು ಭಾರೀ ಗಾಳಿ-ಮಳೆಯಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.












