ಶೃಂಗೇರಿ/ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಭಾರತೀಯ ಷೇರು ಮಾರುಕಟ್ಟೆಗೆ ಸಂಬಂಧಿಸಿದಂತ ಸಂಶೋಧನಾ ಪ್ರಬಂಧದಲ್ಲಿ ಡಾ.ಆದಿತಿ ಕಾಮತ್ಗೆ ಡಾಕ್ಟರೇಟ್ ಪದವಿ ಸಿಕ್ಕಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ

ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜೆಂಟ್ ನಲ್ಲಿ ಸಹಾಯಕ ಪ್ರಾಧ್ಯಾಪಕಿಯಾದ ಡಾ.ಆದಿತಿ ಕಾಮತ್ಗೆ ಹೂಡಿಕೆದಾರರ ಭಾವನೆ ಮತ್ತು ಆಸ್ತಿ ಬೆಲೆಗಳ ಮೇಲೆ ಅದರ ಪ್ರಭಾವ ವಿಷಯದಲ್ಲಿ ನಡೆಸಿದ ಸಂಶೋಧನಾ ಪ್ರಬಂಧಕ್ಕಾಗಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ಡಾಕ್ಟರೇಟ್ ಪದವಿ ಸಿಕ್ಕಿದೆ. ಮಣಿಪಾಲ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ಪ್ರಾಧ್ಯಾಪಕ ಮತ್ತು ನಿರ್ದೇಶಕ ಡಾ.ಸಂದೀಪ್ ಎಸ್.ಶೆಣೈ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
ಇವರು ಈ ಹಿಂದೆ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲೂ ಸಹ ಸೇವೆ ಸಲ್ಲಿಸಿದ್ದು, ಶೃಂಗೇರಿಯ ಬಿ. ಎಸ್ ನವನೀತ್ ಕಾಮತ್ ಮತ್ತು ಮೈತ್ರಿ ಕಾಮತ್ ಅವರ ಪುತ್ರಿಯಾಗಿದ್ದಾರೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ












