ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪರವಾನಿಗೆ ಇಲ್ಲದೆ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಕೃಷಿ ಪರಿಕರಗಳನ್ನು ವಶಪಡಿಸಿಕೊಂಡಿರುವ ಘಟನೆ ಕಡೂರು ಪಟ್ಟಣದಲ್ಲಿ ನಡೆದಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ

ಕಡೂರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಮಳಿಗೆಯಲ್ಲಿರುವ ಶ್ರೀ ಸಪ್ತಕೋಟಿ ಎಂಟರ್ ಪ್ರೈಸಸ್ ಮಾರಾಟ ಮಳಿಗೆಯಲ್ಲಿ ಪರವಾನಿಗೆ ಇಲ್ಲದೆ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ 2.36 ಲಕ್ಷ ಮೌಲ್ಯದ ಜೈವಿಕ ಗೊಬ್ಬರ ಮತ್ತು ಜೈವಿಕ ಕೀಟನಾಶಕಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ;ಈ ತಪ್ಪು ಮಾಡಿದ್ರೆ ಬೀಳುತ್ತೆ ಕೇಸ್ ಜೊತೆ ದಂಡ
ಇನ್ನು ದಾಳಿಯಲ್ಲಿ ಅಪರ ಕೃಷಿ ನಿರ್ದೇಶಕರು (ಜಾರಿದಳ), ತರೀಕೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕರು, ಬೆಂಗಳೂರು ಜಾರಿದಳ ವಿಭಾಗದ ಸಹಾಯಕ ಕೃಷಿ ನಿರ್ದೇಶಕರು, ಕಡೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಇತರೆ ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ












