ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಗುತ್ತಿಗೆ ಆಧಾರದ ಶುಶ್ರೂಷಾಧಿಕಾರಿಗಳು ಇಂದಿನಿಂದ ಅನಿರ್ಧಿಷ್ಟಾವಧಿ ಅಹೋ ರಾತ್ರಿ ಧರಣಿ ಆರಂಭಿಸಿದ್ದಾರೆ.
ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್ ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ, ಅರ್ಜಿ ಲಿಂಕ್ ಇಲ್ಲಿದೆ ನೋಡಿ

15 ರಿಂದ 20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಅತೀ ಕಡಿಮೆ ವೇತನದಲ್ಲಿ ಯಾವುದೇ ಸೌಲಭ್ಯಗಳಿಲ್ಲದೇ ಖಾಯಂ ನೌಕರರಷ್ಟೇ ಇಲಾಖೆ ವಹಿಸಿದ ಎಲ್ಲಾ ಕೆಲಸಗಳನ್ನು ಚಾಚೂ ತಪ್ಪದೇ ನಿರ್ವಹಿಸುತ್ತಿದ್ದು, ಆದರೆ, ಅಲ್ಪ ವೇತನದಲ್ಲಿ ಇನ್ನಿತರ ಯಾವುದೇ ಸೌಲಭ್ಯಗಳಿಲ್ಲದೇ ಕೌಟುಂಬಿಕ ಜೀವನ ನಿರ್ವಹಣೆ ಕಷ್ಟಕರವಾಗಿದೆ.
ಈಗಾಗಲೇ ಹಲವಾರು ಬಾರಿ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಮನವರಿಕೆ ಮಾಡಿ ಮನವಿ ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಿನ್ನೆಯಿಂದ (24-02-2025) ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಬೇಡಿಕೆಗಳೇನು?:
* ಗುತ್ತಿಗೆ ಶುಶ್ರೂಷಾಧಿಕಾರಿಗಳ ಸೇವೆ ಖಾಯಂ ಮಾಡಬೇಕು.
* ಸುಪ್ರೀಂ ಕೋರ್ಟ್ನ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗಧಿ ಪಡಿಸಬೇಕು.
* ಮುಂಬರುವ ವಿಶೇಷ ನೇರ ನೇಮಕಾತಿಯಲ್ಲಿ ಜೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮತಿ ಸಡಿಲಿಕೆ ನೀಡಬೇಕು
* ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ನೀಡಬೇಕು.
* ಶುಶ್ರೂಷಾಧಿಕಾರಿ ತರಬೇತಿ ಪಡೆದು PHCO [2 ANM] ಎದುರು ಹುದ್ದೆಯಲ್ಲಿ” ಸೇವೆ ಮಾಡಿರುವ ಶುಶ್ರೂಷಾಧಿಕಾರಿಗಳ ಆ ಸೇವೆಯನ್ನು ನೇಮಕಾತಿಯಲ್ಲಿ ಪರಿಗಣಿಸಬೇಕೆಂದು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಶೇ.80% ರಷ್ಟು ಸಹಾಯಧನ!; ಈ ರೀತಿ ಅರ್ಜಿ ಸಲ್ಲಿಸಿ ಪಡೆಯಿರಿ












