ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ ಮಾಡಿದ ಅಮಾನುಷ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?

ಜ್ವರ ಬಂದ ಹಿನ್ನೆಲೆ ಅಂಗನವಾಡಿಗೆ ಹೋಗದೇ ಬಾಲಕಿ ಮನೆಯಲ್ಲೇ ಇದ್ದಳು.ಇತ್ತ ತಾಯಿ ಜಮೀನು ಕೆಲಸಕ್ಕೆ ತೆರಳಿದ್ದರು. ಇದನ್ನೇ ಕಾಯುತ್ತಿದ್ದ ಕಾಮಾಂಧರು ಏಕಾಂಗಿಯಾಗಿದ್ದ ಮಗು ಮೇಲೆ ಅಮಾನುಷವಾಗಿ ಹಿಂಸೆಗೈದು, ಹತ್ಯೆ ಮಾಡಿ ಬಾಲಕಿಯ ಮೃತದೇಹವನ್ನು ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ
ಇತ್ತ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ; ಟೀ-ಕಾಫಿ ಸೇವಿಸುತ್ತಿದ್ದರೆ ಎಚ್ಚರ ಎಚ್ಚರ!; ಈ ಸಮಸ್ಯೆ ಕಾಡಬಹುದು…












