ಚಿಕ್ಕಮಗಳೂರು: ಮಹಿಳಾ ಸುರಕ್ಷತೆಗಾಗಿ ಬಂತು ಅಕ್ಕ ಪಡೆ- ಅಧಿಕೃತವಾಗಿ ವಾಹನ ಹಸ್ತಾಂತರ

ಚಿಕ್ಕಮಗಳೂರು ಜಿಲ್ಲೆಯ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ರೂಪಿಸಲಾಗಿರುವ ‘ಅಕ್ಕ ಪಡೆ’ಗೆ ಅಧಿಕೃತವಾಗಿ ವಾಹನವನ್ನು ಹಸ್ತಾಂತರಿಸಲಾಯಿತು.


ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ; ಸೋಲಾರ್ ಪಂಪ್ ಸೆಟ್‌ಗಳಿಗೆ ಅರ್ಜಿ ಆಹ್ವಾನ


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಅವರು ಅಕ್ಕ ಪಡೆಯ ಸಿಬ್ಬಂದಿಗೆ ವಾಹನವನ್ನು ಒಪ್ಪಿಸಿದರು.

ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ, ವಿಶೇಷವಾಗಿ ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣದ ನೆರವು ನೀಡುವ ಉದ್ದೇಶದಿಂದ ಈ ವಾಹನವು ಸಂಚರಿಸಲಿದೆ. ಅಕ್ಕ ಪಡೆ ತಂಡವು ಶಾಲಾ–ಕಾಲೇಜುಗಳ ಸುತ್ತಮುತ್ತ, ಬಸ್ ನಿಲ್ದಾಣಗಳು, ಉದ್ಯಾನವನಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ನಿರಂತರವಾಗಿ ಗಸ್ತು ತಿರುಗಿ ಸುರಕ್ಷತೆ ಒದಗಿಸಲಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ಹಿಂಸೆ ಅಥವಾ ಯಾವುದೇ ಸಂಕಷ್ಟದ ಸಂದರ್ಭಗಳಲ್ಲಿ ತ್ವರಿತ ಸ್ಪಂದನೆ ನೀಡುವುದು ಈ ಪಡೆಯ ಪ್ರಮುಖ ಗುರಿಯಾಗಿದೆ.


ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ


ಪೊಲೀಸ್ ಇಲಾಖೆಯ ‘ಹೊಯ್ಸಳ’ ಗಸ್ತು ವಾಹನಗಳ ಮಾದರಿಯಲ್ಲೇ ಕಾರ್ಯನಿರ್ವಹಿಸುವ ಅಕ್ಕ ಪಡೆ, ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಯನ್ನು ಒಳಗೊಂಡಿರುತ್ತದೆ. ಸಮಾಜದಲ್ಲಿ ಮಹಿಳೆಯರಿಗೆ ಭಯಮುಕ್ತ ವಾತಾವರಣ ನಿರ್ಮಿಸುವುದು ಮತ್ತು ಅಗತ್ಯ ಸಂದರ್ಭಗಳಲ್ಲಿ ರಕ್ಷಣೆಯ ಕವಚವಾಗಿ ಕಾರ್ಯನಿರ್ವಹಿಸುವುದು ಅಕ್ಕ ಪಡೆಯ ಉದ್ದೇಶವಾಗಿದ್ದು, ತುರ್ತು ಸಂದರ್ಭಗಳಲ್ಲಿ ರಕ್ಷಣೆ ನೀಡಲು ಒಂದು ಪ್ರಮುಖ ಕೊಂಡಿಯಾಗಿ ಕೆಲಸ ಮಾಡಲಿದೆ.


ಇದನ್ನೂ ಓದಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆ ಜಾರಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.