ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಹಣಕ್ಕಾಗಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವಿಭಾಗದ ರೋಗಿಗಳನ್ನು ದಾಖಲಿಸಿಕೊಂಡು ಅನಾವಶ್ಯಕ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ಆರೋಪವೊಂದು ಕೇಳಿ ಬಂದಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?

ಹೌದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ರಾಘವೇಂದ್ರ ಅವರು ಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರಾದ ಶಿವಕುಮಾರ್ ಎಲ್ ಜನರಲ್ ಸರ್ಜನ್ ಇವರು ತಮ್ಮ ವ್ಯಾಪ್ತಿಮೀರಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವಿಭಾಗದ ರೋಗಿಗಳನ್ನು ದಾಖಲಿಸಿಕೊಂಡು ಅನಾವಶ್ಯಕ ಶಸ್ತ್ರ ಚಿಕಿತ್ಸೆಗಳನ್ನು ಹಣಕ್ಕಾಗಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚಿಸಿ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ಥಬಾಬು ಆದೇಶ ಹೊರಡಿಸಿದ್ದಾರೆ.












