ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ದಲಿತರ ಭೂ ಕಬಳಿಕೆ ಆರೋಪ: ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದಲಿತರ ಭೂಮಿ ಕಬಳಿಸುವ ಉದ್ದೇಶದಿಂದ ವ್ಯಕ್ತಿಯೊಬ್ಬರು ನಕಲಿ ದಾಖಲೆಗಳನ್ನು ಸೃಷ್ಟಿಸಿ, ದಲಿತರ ಮೇಲೆ ದೌರ್ಜನ್ಯ
ನಡೆಸುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಪರಿಹರಿಸ ಬೇಕೆಂದು ಆಗ್ರಹಿಸಿ ಸಂತವೇರಿ ಗ್ರಾಮಸ್ಥದ ದಲಿತರು ಅನಿಧಿಷ್ಟಾವಧಿ ಉಪವಾಸ ಸತ್ಯಾ ಗ್ರಹ ನಡೆಸಿದರು.


ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ


ತರೀಕೆರೆ ತಾಲೂಕು ಲಿಂಗದಹಳ್ಳಿ ಹೋಬಳಿ ಕಾಮನದುರ್ಗ ಗ್ರಾ.ಪಂ.ವ್ಯಾಪ್ತಿಯ ಸಂತವೇರಿ ಗ್ರಾಮದಲ್ಲಿ ಸರ್ವೇ ನಂಬರ್ 25ರಲ್ಲಿ 1952 53ರಲ್ಲಿ ಸರ್ಕಾರದಿಂದ ದಲಿತರಿಗೆ ತಲಾ ಎರಡೂವರೆ ಎಕರೆ ಜಮೀನು 16 ಜನರಿಗೆ ಮಂಜೂರಾಗಿದ್ದು, ಭೂಮಿ ಸ್ವಾಧೀನದಲ್ಲಿದೆ. ಆದರೆ, ಚಿಕ್ಕಮಗಳೂರು ನಗರದಲ್ಲಿ ರಿಯಲ್ ಎಸ್ಟೇಟ್ ನಡೆಸುವ ವ್ಯಕ್ತಿಯೊಬ್ಬರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಹಾಗೂ ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಗ್ರಾಮಸ್ಥರಾದ ನಂಜುಂಡ, ಮೋಹನ್ ಎಂಬುವರು ಮಾತನಾಡಿ, ಇಲ್ಲಿ ನೆಲೆಸಿರುವ ಬಹುತೇಕ ಕುಟುಂಬಸ್ಥರು ಬಡವರಾಗಿದ್ದು, ಸರ್ಕಾರದಿಂದ 1952-53 ನೇ ಸಾಲಿನಲ್ಲಿ 16 ಜನರಿಗೆ ತಲಾ ಎರಡೂವರೆ ಎಕರೆ ಜಮೀನು ಮಂಜೂರಾಗಿದೆ. ಇವರೆಲ್ಲೂರ ತಮ್ಮ ಜಮೀನಿಗೆ ಸಂಬಂಧಿಸಿದಂತೆ ಪಹಣಿ, ಎಂ.ಆರ್., ಸಾಗುವಳಿ ಚೀಟಿ ಹೊಂದಿದ್ದಾರೆ ಮತ್ತು ಜಮೀನು ಸ್ವಾಧೀನದಲ್ಲಿದ್ದಾರೆ ಎಂದರು.


ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ


ರಿಯಲ್ ಎಸ್ಟೇಟ್ ಮಾಫಿಯಾದ ಚಿಕ್ಕಮಗಳೂರಿನ ವ್ಯಕ್ತಿಯೊಬ್ಬರು ಸಾಗುವಳಿ ಚೀಟಿಯನ್ನು ಬೇರೆಯವರ ಹೆಸರಿನಲ್ಲಿ ಸೃಷ್ಟಿಸಿ ದಲಿತರ ಜಮೀನು ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ತಹಶೀಲ್ದಾರ್ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ, ಈ ನಿಟ್ಟಿನಲ್ಲಿ ಅನಿಧಿಷ್ಠವಾಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು.

ಶಾಸಕ ಜಿ.ಎಚ್.ಶ್ರೀನಿವಾಸ್ ರಿಯಲ್ ಎಸ್ಟೇಟ್ ಮಾಫಿಯಾದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ತಹಶೀಲ್ದಾರ್ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಗ್ರಾಮಸ್ಥ ವಿಷ್ಣು ಮಾತನಾಡಿ, ನಾವು ಭೂಮಿ ಸ್ವಾಧೀನದಲ್ಲಿದ್ದರೂ ರಿಯಲ್ ಎಸ್ಟೇಟ್ ಮಾಫಿಯ ವ್ಯಕ್ತಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಲು ಮುಂದಾಗಿದ್ದಾನೆ. ಯುವಕರ ಗುಂಪು ಕಟ್ಟಿಕೊಂಡು ಬಂದು ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ತಮಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ರಾಜೇಶ್, ಜಗದೀಶ್, ಪುಟ್ಟಸ್ವಾಮಿ, ಜಯಕುಮಾರ್, ಡಿ.ಮಂಜು, ಮೋಹನ್ ಹಾಗೂ ಮಹಿಳೆಯರು ಇದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.