ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ; ಸೋಲಾರ್ ಪಂಪ್ ಸೆಟ್ಗಳಿಗೆ ಅರ್ಜಿ ಆಹ್ವಾನ

ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಆಸ್ಪತ್ರೆಗೆ ಬಂದು ಸುಮಾರು ಒಂದು ಗಂಟೆ ಕಳೆದರೂ ಸೂಕ್ತ ಚಿಕಿತ್ಸೆ ಸಿಗದೆ ಮಂಜುನಾಥ್ ಪರದಾಡಿದ್ದು, ನಂತರ ತಡವಾಗಿ ಐಸಿಯುವಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ












