ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್

ಬಣಕಲ್ ಸಬ್ ಇನ್ಸ್ಪೆಕ್ಟರ್ ಎನ್.ಕೆ. ಓಮನ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು, ಸಮಾಜ ಸುಧಾರಕರು ತಮ್ಮ ಕೊಡುಗೆಗಳನ್ನು ನೀಡಿದ್ದು, ಅದರಲ್ಲಿ ಅಂಬೇಡ್ಕರ್ ಅವರು ತಮ್ಮ ವಿಶಿಷ್ಟ ಹೋರಾಟದ ಮುಖಾಂತರ ಶೋಷಿತರನ್ನು ದೀನದಲಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಯಾವಾಗಲೂ ಮಾದರಿಯಾಗಿ ಉಳಿಯುತ್ತಾರೆ. ಅಂಬೇಡ್ಕರ್ ಅವರು ಇಂದಿನ ಯುವ ಪೀಳಿಗೆಗೆ ಆದರ್ಶವಾಗಿದ್ದಾರೆ ಎಂದರು.
ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ
ಈ ಸಂದರ್ಭದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ರವಿ, ಸಿಬ್ಬಂದಿಗಳಾದ ಬಿ.ಎಸ್.ವರ್ಷಿಣಿ, ಸ್ವಾತಿ, ರಘು, ಮಂಜುನಾಥ್, ಮಾಲತೇಶ್, ಸಚಿನ್ ಇದ್ದರು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್
ಎನ್.ಆರ್ ಪುರ: ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿನ್ನೆ ಮಳೆ ಸುರಿದಿದ್ದು, ಬಿರುಬೇಸಿಗೆಯಿಂದ ಕಾದ ಕಾವಲಿಯಂತಾಗಿದ್ದ ಭೂಮಿಗೆ ತಂಪೆರೆದಿದೆ. ಇದರ ನಡುವೆ ಮಲೆನಾಡಿನಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದಾರೆ.
ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!
ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಅರಳಿಕೊಪ್ಪದಲ್ಲಿ ತೋಟಕ್ಕೆ ತೆರಳಿದ್ದ ರೈತನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಶಂಕರ್ (48) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.
ಇದನ್ನೂ ಓದಿ; SBI ಅಮೃತ್ ಕಲಶ್ ಎಫ್ಡಿ ಸ್ಕೀಮ್; ಹೂಡಿಕೆ ಗಡುವು ವಿಸ್ತರಿಸಿದ ಎಸ್ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್
ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದ್ದು, ಚಿಕ್ಕಮಗಳೂರು ನಗರ, ಮಲ್ಲೇನಹಳ್ಳಿ, ಖಾಂಡ್ಯ, ಮುತ್ತೋಡಿ ಭಾಗದಲ್ಲಿ 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ












