ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಬಿಳಗುಳ ಸಮೀಪದ ಎನ್ಎಚ್ 173ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಮತ್ತೊಮ್ಮೆ ರಸ್ತೆ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಹೌದು, ಚಾಲಕನ ಅತಿ ವೇಗ ಮತ್ತು ಸಂಚಾರ ನಿಯಮಗಳ ಉಲ್ಲಂಘನೆಯೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತೋಟದ ಕೂಲಿ ಕಾರ್ಮಿಕರಾದ ಕಾರ್ತಿಕ್ ಹಾಗೂ ಅವರ ಪತ್ನಿ ಸಿಂಗಮ್ಮ ದ್ವಿಚಕ್ರ ವಾಹನದಲ್ಲಿ ಮೂಡಿಗೆರೆಗೆ ಬರುತ್ತಿದ್ದಾಗ, ಎದುರಿನಿಂದ ಅತಿ ವೇಗವಾಗಿ ಬಂದ ಪಿಕ್ಅಪ್ ವಾಹನವು ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಕಾರ್ತಿಕ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ.
ಘಟನೆಯ ಬಳಿಕ ಸ್ಥಳೀಯರು ತಕ್ಷಣ ಸಹಾಯಕ್ಕೆ ಧಾವಿಸಿ, ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರ ಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕರೆದೊಯ್ಯುವಾಗ, ಬೇಲೂರು ಸಮೀಪ ಕಾರ್ತಿಕ್ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಸಿಂಗಮ್ಮ ಅವರಿಗೂ ಗಾಯಗಳಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಈ ಅಪಘಾತಕ್ಕೆ ಪಿಕ್ಅಪ್ ವಾಹನದ ಚಾಲಕನ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)












