ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಅಂದರ್-ಬಾಹಾರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಎಂಟು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರು ಗ್ರಾಮದ ಮೆಡಿಕಲ್ ಕಾಲೇಜು ಹಿಂಭಾಗವಿರುವ ತಿಮ್ಮಾಳಮ್ಮ ದೇವಸ್ಥಾನ ಸಮೀಪ ನಡೆದಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಅಕ್ರಮವಾಗಿ ಅಂದರ್-ಬಾಹಾರ್ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ರಘುನಾಥ್ ಮತ್ತು ಸಿಬ್ಬಂದಿ, ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯ ವೇಳೆ ತೇಗೂರು ಗ್ರಾಮದ ನಿವಾಸಿಗಳಾದ ಮೂರ್ತಿ (45), ದೇವರಾಜು (45), ಸುನಿಲ (35), ಮನು (30), ಶ್ರೀಧರ (46), ರವಿ (46), ಮಲ್ಲಿಕಾರ್ಜುನ (55) ಹಾಗೂ ಬಸವರಾಜು (51) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಜೂಜಾಟದ ಸ್ಥಳದಿಂದ ಒಟ್ಟು 5,500 ರೂಪಾಯಿ ನಗದು ಹಣ, 52 ಇಸ್ಪೀಟು ಎಲೆಗಳು ಹಾಗೂ ಒಂದು ಬಿಳಿ ಬಣ್ಣದ ಚೀಲವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













