ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ತುಳಿತಕ್ಕೆ ಮೃತಪಟ್ಟ ಮೀನಾ (29) ಅವರ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 1433 ಹುದ್ದೆ ಮಂಜೂರು

ಏನಿದು ಘಟನೆ:
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಮಹಿಳೆಯೊರ್ವಳು ಇಂದು ಬೆಳಗ್ಗೆ ಮೃತಪಟ್ಟಿದ್ದಳು. ಇದು ಎರಡು ತಿಂಗಳಲ್ಲಿ ಎರಡನೇ ಬಲಿಯಾಗಿದೆ. ಈ ಕುರಿತು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅರಣ್ಯ ಇಲಾಖೆಯ ಎದುರು ಮೀನಾ ಅವರ ಮೃತದೇಹ ಇಟ್ಟು ಪ್ರತಿಭಟನೆಯನ್ನು ನಡೆಸಿದ್ದರು.
ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ:
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು. ಪಟ್ಟಣಕ್ಕೆ ಬಂದಿರುವ ಕಾಡಾನಗಳನ್ನು ವಾಪಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜೊತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ. ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜೊತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಾಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಇತರೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಮಗಳೂರು: ಯುವ ನಿಧಿ ಯೋಜನೆ: ಶೀಘ್ರವೇ ಜಾರಿಗೊಳಿಸುವಂತೆ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದಿಂದ ಪ್ರತಿಭಟನೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ ಯುವ ನಿಧಿ ಯೋಜನೆಯನ್ನು ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದರು.
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ಕುರ್ಚಿ ಕದನದ ಬಗ್ಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು” ಸಿಎಂ ಕುರ್ಚಿ ಮಾರಾಟಕ್ಕಿದೆ” ಎಂದು ಫಲಕ ಹಾಕಿ ವ್ಯಂಗ್ಯ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ನಗರಸಭೆ ಸದಸ್ಯರುಗಳು, ಮಹಿಳಾ ಮೋರ್ಚಾದ ಕಾರ್ಯಕರ್ತರು, ಯುವ ಮೋರ್ಚಾ ನಗರ ಗ್ರಾಮಾಂತರ ಮತ್ತು ಜಿಲ್ಲಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.












