ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸೋ ಚಾರ್ಮಾಡಿ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಟರ್ನ್ ಅಗದೇ ಲಾಕ್ ಆಗಿರುವ ಘಟನೆ ನಡೆದಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!

ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ, ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಕಳೆದ 2 ಗಂಟೆಯಿಂದ ಮುಂದೆ ಸಾಗಲು ಆಗದೇ ನಿಂತಿದೆ. ಇದರಿಂದಾಗಿ ಇತರ ವಾಹನಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕೆ ನಿಷೇದವಿದ್ದರೂ ಕೂಡ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ.

ಕೊಟ್ಟಿಗೆಹಾರ: ದಾಖಲೆ ತೋರಿಸಿದರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.

ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ದೇವತಾ ಕಾರ್ಯಕ್ಕೆಂದು ಕೊಂಡೊಯ್ಯುತ್ತಿದ್ದ 85 ಸಾವಿರ ಹಣವನ್ನು ವಶಪಡಿಕೊಂಡಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆದ ಪಿ.ಎಸ್ ಆಚಾರ್ಯ ಬ್ಯಾಂಕ್ ನಿಂದ ಹಣ ಡ್ರಾ ಮಾಡಿರುವ ದಾಖಲೆ ತೋರಿಸಿದರು ಕೂಡ ಎಫ್.ಎಸ್.ಟಿ ಹಾಗೂ ಬಣಕಲ್ ಪೊಲೀಸರ ನೇತೃತ್ವದಲ್ಲಿ ಹಣ ಸೀಜ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್‌ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ

ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.