ಕಾಡಾನೆ ದಾಳಿಗೆ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ

ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟದಲ್ಲಿ ನಡೆದಿದೆ. ಗಣಪತಿ (49) ಕಾಡಾನೆಗೆ ಬಲಿಯಾದ ವ್ಯಕ್ತಿ.

ನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ

ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರನ ಮೇಲೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಗಣಪತಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲೂಕಿನ ಗುಡ್ಡಗಾಡು ಗ್ರಾಮ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಸಂಜೆ ತನ್ನ ತಂದೆ-ತಾಯಿ ಜೊತೆ ಬೈಕ್​ನಲ್ಲಿ ಬಂದ ಪೂಜ್ಯ, ಬೈಕ್​ನಿಂದ ಇಳಿದ ಕೆಲವೇ ಸೆಕೆಂಡುಗಳಲ್ಲಿ ಕತ್ತಲಿನಲ್ಲಿ ಹಿಂಬದಿಯಿಂದ ಬಂದ ಆನೆ ಭೀಕರ ದಾಳಿ ನಡೆಸಿತ್ತು. ಸಲಗದ ಕಾಲಡಿ ಸಿಲುಕಿದ್ದ ಪೂಜ್ಯ ಪ್ರಾಣ ಬಿಟ್ಟಿದ್ದರು. ಇದಾದ 10 ದಿನಗಳು ಕಳೆಯುವುದರ ಒಳಗೆಯೇ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು.

ನ್ನೂ ಓದಿ: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ

ಚಿಕ್ಕಮಗಳೂರು ಜಿಲ್ಲೆ ಅಲ್ಲದೇ ಕಾಡಾನೆ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮೇಲಿಂದ ಮೇಲೆ ಸಾವುಗಳಾಗ್ತಿರೋದು ಜನರ ನಿದ್ದೆಗೆಡಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಡಾನೆಗಳ ದಾಳಿ ನಿಯಂತ್ರಣಕ್ಕೆ ಆಗ್ರಹ ಕೇಳಿಬಂದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.