ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಒಂದು ವಾರದ ಅಂತರದಲ್ಲಿ ಇದೇ ಪ್ರದೇಶದಲ್ಲಿ ಎರಡನೇ ಸಾವು ಸಂಭವಿಸಿರುವ ಕಾರಣ ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿ ಹಾವೇರಿ ಜಿಲ್ಲೆಯ ಹಾನಗಲ್ ಮೂಲದ ಬೋರಮ್ಮ (33) ಸಾವನ್ನಪ್ಪಿದ್ದಾರೆ.

ಕಳೆದ ಸೋಮವಾರ ಇದೇ ಪ್ರದೇಶದಲ್ಲಿ ಮತ್ತೊಬ್ಬ ಕಾರ್ಮಿಕನನ್ನು ಕಾಡಾನೆ ಬಲಿ ಪಡೆದಿತ್ತು. ಆ ಘಟನೆಯ ಬಳಿಕ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಕಾಡಾನೆಗೆ ಮದವೇರಿರುವ ಕಾರಣ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಮದವೇರಿದ್ದ ಅದೇ ಕಾಡಾನೆಯಿಂದ ಮತ್ತೊಂದು ಜೀವ ಹಾನಿಯಾಗಿರುವುದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.