ಚಿಕ್ಕಮಗಳೂರು: ಆನೆ ದಾಳಿಗೆ ಮತ್ತೋರ್ವ ಕಾರ್ಮಿಕನ ಬಲಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೋರ್ವ ಕಾರ್ಮಿಕನನ್ನು ಬಲಿ ಪಡೆದ ದುರ್ಘಟನೆ ಚಿಕ್ಕಮಗಳೂರು ತಾಲ್ಲೂಕಿನ ದೇವದಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾವೇರಿ ಮೂಲದ ಯಲ್ಲಪ್ಪ (45) ಮೃತ ದುರ್ದೈವಿ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಯಲ್ಲಪ್ಪ ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ತಿರುವಳ್ಳಿ ಮೂಲದವರಾಗಿದ್ದು, ಕೂಲಿ ಕೆಲಸ, ಗಾರೆ ಕೆಲಸ ಮಾಡುತ್ತಿದ್ದ ಇವರು ನಿನ್ನೆ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದ ನಾಗೇಶ್ ಗೌಡರ ತೋಟದ ಮೂಲಕ ಶ್ರೀಧರ್ ಗೌಡ ಅವರ ತೋಟದ ಲೈನ್ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ಪರಿಣಾಮ ಯಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಕಾಡಾನೆ ದಾಳಿಯಿಂದ 2 ವರ್ಷದಲ್ಲಿ 15 ಕ್ಕೂ ಹೆಚ್ಚು ಮಂದಿ ಸಾವು:
ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕಾಡಾನೆ ದಾಳಿಯಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಗಣಪತಿ (41) ಎಂಬ ಕಾರ್ಮಿಕ ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದರು. ಇದೇ ತಾಲೂಕಿನ ಬನ್ನೂರು ಗ್ರಾಮದಲ್ಲಿ ಅನಿತಾ ಎಂಬ ಕೂಲಿ ಕಾರ್ಮಿಕ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಅನಿತಾ ಅವರನ್ನು ಬಲಿ ಪಡೆಯುವ ಐದು ದಿನಗಳ ಅಂತರದಲ್ಲಿ ಸುಬ್ಬೇಗೌಡ ಎಂಬವವರು ಕಾಡಾನೆ ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದರು.

ಇನ್ನು ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಕ್ಕಡಬೈಲು ಗ್ರಾಮದಲ್ಲಿ ಎಲಿಯಾಸ್ (60), ಕೊಪ್ಪ ತಾಲೂಕಿನ ಸೀತೂರು ಗ್ರಾಮ ಪಂಚಾಯತಿ ಹಿಂಭಾಗ ಕೆರೆಗದ್ದೆ ನಿವಾಸಿ ಉಮೇಶ್ (55) ಶೃಂಗೇರಿಯ ಕೆರೆಕಟ್ಟೆಯ ಹರೀಶ್ ಮತ್ತು ಉಮೇಶ್ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ರು.

ಪ್ರತಿ ಬಾರಿ ದಾಳಿ ನಡೆದಾಗ ಮಾತ್ರ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಹಾರ ಘೋಷಣೆ ಮಾಡುತ್ತಾರೆ. ಆದರೆ ಶಾಶ್ವತ ಪರಿಹಾರ ಕಂಡುಹಿಡಿಯುವಲ್ಲಿ ವಿಫಲರಾಗಿದ್ದಾರೆ. ಮನುಷ್ಯನ ಜೀವದ ಜೊತೆ ಆಟವಾಡುತ್ತಿರುವ ಕಾಡಾನೆಗಳಿಗೆ ಕಡಿವಾಣ ಹಾಕುವವರು ಯಾರು? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.