ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಖಿಲ ಭಾರತ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಶನ್ ಹಾಗೂ ಅಖಿಲ ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದ ಕರೆಯ ಮೇರೆಗೆ ಬುಧವಾರ ಶೃಂಗೇರಿ ತಾಲ್ಲೂಕಿನ ಔಷಧಿ ಅಂಗಡಿಗಳು ಸಾಮೂಹಿಕ ಬಂದ್ ಆಚರಿಸಿ ಪ್ರತಿಭಟನೆ ನಡೆಸಿದವು.
ಮಲೆನಾಡು ಔಷಧಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ನಡೆದ ಬಂದ್ಗೆ ಶೃಂಗೇರಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಬಹುತೇಕ ಮೆಡಿಕಲ್ ಅಂಗಡಿಗಳು ಬೆಂಬಲ ಸೂಚಿಸಿ ದಿನಪೂರ್ತಿ ವಹಿವಾಟು ಸ್ಥಗಿತಗೊಳಿಸಲಾಯಿತು.

ಈ ಸಂಬಂಧ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಶೃಂಗೇರಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳಿಗೆ ತಮ್ಮ ಬೇಡಿಕೆಗಳನ್ನು ರವಾನಿಸುವಂತೆ ಒತ್ತಾಯಿಸಿದರು.
ಪ್ರತಿಭಟನಾಕಾರರು ಕೋವಿಡ್ ಅವಧಿಯಲ್ಲಿ ನೀಡಲಾಗಿರುವ e-ಫಾರ್ಮಸಿ ಪರವಾನಗಿಯನ್ನು ರದ್ದುಗೊಳಿಸಬೇಕು, ಆನ್ಲೈನ್ ಔಷಧಿ ವಿತರಣೆಗೆ ನೀಡಿರುವ ಅನುಮತಿಯನ್ನು ಹಿಂತೆಗೆದುಕೊಳ್ಳಬೇಕು, ಕಾರ್ಪೊರೇಟ್ ಕಂಪನಿಗಳು ನೀಡುತ್ತಿರುವ ಅತಿಯಾದ ರಿಯಾಯಿತಿಗೆ ಕಡಿವಾಣ ಹಾಕಬೇಕು ಹಾಗೂ ಗುಣಮಟ್ಟವಿಲ್ಲದ ಔಷಧಿಗಳ ಮಾರಾಟವನ್ನು ತಡೆಯಬೇಕು ಎಂದು ಆಗ್ರಹಿಸಿದರು.












