
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ವಿವಿಧ ಭಾಗಗಳಲ್ಲಿ ಮನೆಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳವು- ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಬಂಗಾರದ ಗಟ್ಟಿ ಸೇರಿದಂತೆ 25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ

ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅನೇಕ ಕಳ್ಳತನ ಪ್ರಕರಣ ನಡೆದಿದ್ದು, ಪ್ರಭಾರ ವೃತ್ತ ನಿರೀಕ್ಷಕ ಗವಿರಾಜ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿತ್ತು.
ಈ ತಂಡ ಬೆಂಗಳೂರಿನ ಆರ್ ಟಿ ನಗರದಲ್ಲಿ ನೆಲೆಸಿದ್ದ ಚಿಕ್ಕಮಗಳೂರು ಉಪ್ಪಳ್ಳಿ ನಿವಾಸಿ ಮುಹಮ್ಮದ್ ಕಬೀರ್, ಬೆಂಗಳೂರಿನ ಡಿಜೆ ಹಳ್ಳಿ ನಿವಾಸಿ ಯೂಸುಫ್ ಪಾಷಾನನ್ನು ಬಂಧಿಸಿ ಒಟ್ಟು 334 ಗ್ರಾಂ ಬಂಗಾರದ ಗಟ್ಟಿ, 295 ಗ್ರಾಂ ಚಿನ್ನ, 350 ಗ್ರಾಂ ಬೆಳ್ಳಿ ಸೇರಿದಂತೆ ಬೈಕ್, ಪಿಸ್ತೂಲ್ ಅನ್ನು ವಶಪಡಿಸಿಕೊಂಡಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಪಿಸ್ತೂಲ್ ನಿಂದ ಪತ್ತೆಯಾದ ಪ್ರಕರಣ:
ಮನೆಗಳ್ಳತನ ಪ್ರಕರಣದಲ್ಲಿ ಬಸವನಹಳ್ಳಿ ಠಾಣೆ ಪೊಲೀಸರು ಚಿಕ್ಕಮಗಳೂರಿನ ಮಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಕಬೀರ್ ಬಳಿ ಒಂದು ಪಿಸ್ತೂಲ್ ಪತ್ತೆಯಾಗಿತ್ತು. ಈ ಪಿಸ್ತೂಲ್ ಅನ್ನು ವೈಜ್ಞಾನಿಕ ಪರೀಕ್ಷೆಗೆ ಕಳಿಸಿದಾಗ 2020ರ ಜು.11ರಂದು ಚಿಕ್ಕಮಗಳೂರು ನಗರದ ಕೇಸರಿ ಜ್ಯೂವೆಲರಿ ಅಂಗಡಿಯಲ್ಲಿ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ ಪ್ರಯತ್ನಿಸಿದ ಸ್ಥಳದಲ್ಲಿ ದೊರೆತ ಗುಂಡಿಗೆ ಹೋಲಿಕೆಯಾಗಿದೆ. ಈ ಮೂಲಕ ನಾಲ್ಕೂವರೆ ವರ್ಷಗಳ ಹಿಂದೆ ನಡೆದಿದ್ದ ರಾಬರಿ ಯತ್ನ ಪ್ರಕರಣದ ಆರೋಪಿಯೂ ಸಿಕ್ಕಿಬಿದ್ದಂತಾಗಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಮಹಮ್ಮದ್ ಕಬೀರ್ ಹಾಗೂ ಯೂಸುಫ್ ಪಾಷಾ ವಿರುದ್ಧ ಮಂಗಳೂರು ನಗರ, ಶಿವಮೊಗ್ಗ, ತುಮಕೂರು, ದಾವಣಗೆರೆ ಚಾಮರಾಜನಗರ ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.













