
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ವಿದ್ಯಾರಣ್ಯಪುರ ಸಮೀಪ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ಟುಡಿಯೋವೊಂದರಲ್ಲಿ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ ಅಶ್ವಥ್ ಆಚಾರ್ಯ (30) ಮೃತ ಯುವಕ.

ಇಂದು ಬೆಳಗ್ಗೆ ಅವರ ತಾಯಿ ಮನೆಯ ಹಿಂದಿರುವ ತೋಟದಲ್ಲಿ ಕಟ್ಟಿಗೆ ತರಲು ತೆರಳಿದಾಗ ಅಶ್ವಥ್ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪಡೆದ ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇನ್ನು ಅಶ್ವಥ್ ಅವರ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೋಲೀಸರ ತನಿಖೆ ಬಳಿಕ ತಿಳಿದುಬರಬೇಕಿದೆ. ಅಶ್ವತ್ ಮೃದು ಸ್ವಭಾವಾದ ಯುವಕನಾಗಿದ್ದು ಯಾರೊಂದಿಗೂ ದ್ವೇಷ ಕಟ್ಟಿಕೊಂಡವನಲ್ಲ. ಆನ್ಲೈನ್ ಫೈನಾನ್ಸ್ ಆಪ್ ನಲ್ಲಿ ಸಾಲ ಮಾಡಿಕೊಂಡಿದ್ದ. ಇದರಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.














