ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಈಗ ಆರೋಗ್ಯ ತಪಾಸಣೆ ವೇಳೆ ಘಟನೆ ಹೊರಬಂದಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಪ್ರವೃತ್ತರಾದ ಪೊಲೀಸರು ಆರೋಪಿ ನಿಕ್ಕಿಮ್ ಎನ್ನುವನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈತ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಶೃಂಗೇರಿ: ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಈಗ ಆರೋಗ್ಯ ತಪಾಸಣೆ ವೇಳೆ ಘಟನೆ ಹೊರಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಪ್ರವೃತ್ತರಾದ ಪೊಲೀಸರು ಆರೋಪಿ ನಿಕ್ಕಿಮ್ ಎನ್ನುವನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಸಹ ಅಪ್ರಾಪ್ತನಾಗಿದ್ದು 17 ವರ್ಷದವನಾಗಿದ್ದಾನೆ, ಈತ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ಸೇರಿಸಿಕೊಂಡಿರುವ ಮಾಲೀಕನ ವಿರುದ್ಧ ಸಹ ಕ್ರಮ ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ. ಅಸ್ಸಾಂ ಕಾರ್ಮಿಕರು ಹಾಗೂ ಬಾಂಗ್ಲಾ ನುಸುಳುಕೋರರು ಮಲೆನಾಡಿನ ಎಸ್ಟೇಟ್ ಗಳಲ್ಲಿ ನುಸುಳಿಕೊಂಡಿದ್ದು ಕಡಿಮೆ ಕೂಲಿಗೆ ಸಿಗುತ್ತಾರೆ ಎಂಬ ಕಾರಣಕ್ಕೆ ಎಸ್ಟೇಟ್ ಮಾಲೀಕರು ಸಹ ಕಾನೂನನ್ನು ಗಾಳಿಗೆ ತೂರಿ ಇಂತವರನ್ನು ತಮ್ಮ ಎಸ್ಟೇಟ್ ನಲ್ಲಿ ಕೆಲಸಕ್ಕೆ ನಿರ್ವಹಿಸಿಕೊಂಡಿದ್ದಾರೆ.













