
ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಅಸ್ಸಾಂ ಮೂಲದ ಮೇಸ್ತ್ರಿಯೊಬ್ಬ ಕಾಫಿ ತೋಟದಲ್ಲಿ ಕಾರ್ಮಿಕರಿಗೆ ಆಟಿಕೆ ಪಿಸ್ತೂಲ್ ಹಿಡಿದು ಬೆದರಿಕೆ ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ತಾಲ್ಲೂಕಿನ ಹಾನುಬಾಳು ಹೋಬಳಿ ವ್ಯಾಪ್ತಿಯ ವೆಂಕಟಹಳ್ಳಿ ಗ್ರಾಮದಲ್ಲಿ ಬೆಂಗಳೂರು ಮೂಲದ ಪ್ರತಾಪ್ ಅವರ ಕಾಫಿ ತೋಟದಲ್ಲಿ ಮೇಸ್ತ್ರಿಯಾಗಿದ್ದ ಅಸ್ಸಾಂ ಮೂಲದ ಕುಲ್‌ಬಾಬು ಎಂಬಾತನೇ ಬೆದರಿಕೆಯೊಡ್ಡಿದ್ದಾನೆ. ‘ಕೆಲಸಕ್ಕೆ ಬರುವುದಿಲ್ಲ ಎಂದು ಅಸ್ಸಾಂ ಮೂಲದ ಕಾರ್ಮಿಕರು ಪಟ್ಟು ಹಿಡಿದಿದ್ದರಿಂದ ಆಟಿಕೆ ಪಿಸ್ತೂಲ್ ತೋರಿಸಿ ಬೆದರಿಸುತ್ತಿದ್ದ ದೃಶ್ಯವನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಪೊಲೀಸ್ ಇನ್‌ಸ್ಪೆಕ್ಟರ್ ನಿರಂಜನ್ ಹಾಗೂ ಸಿಬ್ಬಂದಿ ತೋಟಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ‘ಕೆಲವು ದಿನಗಳ ಹಿಂದೆಯೇ ಈ ಘಟನೆ ನಡೆದಿದೆ. ತೋಟದ ಮಾಲೀಕ ಈ ವಿಡಿಯೊವನ್ನು ಸ್ನೇಹಿತರಿಗೆ ಕಳಿಸಿದ್ದು, ಅಲ್ಲಿಂದ ಹರಿದಾಡಿದೆ’ ಎಂದು ಇನ್‌ಸ್ಪೆಕ್ಟರ್ ನಿರಂಜನ್ ಹೇಳಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಮೂಡಿಗೆರೆ ತಾಲ್ಲೂಕಿನ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಮೇಸ್ತ್ರಿಯನ್ನು ಪತ್ತೆ ಹಚ್ಚಿದ ಪೊಲೀಸರು ವಿಚಾರಣೆ ನಡೆಸಿದಾಗ ಜಾತ್ರೆಯಲ್ಲಿ ತಂದಿದ್ದ ಆಟಿಕೆ ಪಿಸ್ತೂಲ್ ಎಂಬುದು ದೃಢವಾಯಿತು. ‘ನಾವು ಕೆಲಸಕ್ಕೆ ಬರುವುದಿಲ್ಲ, ಊರಿಗೆ ಹೋಗಬೇಕು ಎಂದು ಕಾರ್ಮಿಕರು ಪಟ್ಟು ಹಿಡಿದ ಕಾರಣಕ್ಕೆ ಆಟಿಕೆ ಪಿಸ್ತೂಲ್ ಹಿಡಿದು ಹೆದರಿಸಿದೆ ಎಂದು ಕುಲ್ ಬಾಬು ಪೊಲೀಸರಿಗೆ ತಿಳಿಸಿದ್ದಾನೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?













