ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಗೂಗಲ್ ಪೇನಲ್ಲಿ ಅದ್ಭುತವಾದ ವೈಶಿಷ್ಟ್ಯ ಪರಿಚಯ!; ಏನದು ಗೊತ್ತಾ?

ಹಾಸನದಲ್ಲಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರು ಮೇಲೆ ಕೀಚಕರು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಅರೆಕೆರೆ ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಕರು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಕರುವಿಗೆ ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ!; ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ













