ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮರದಿಂದ ಬಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಹೊಡೆದು ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕುಮಾರ್ (37) ಮೃತ ದುರ್ದೈವಿ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಮಧು ಎನ್ನವವನ ತೋಟದಲ್ಲಿ ಕುಮಾರ್ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಂಡು ಹೋಗ್ತಿದ್ದ. ತೋಟದ ಮಾಲೀಕ ಮಧು ಈ ಹಿಂದೆ ಸಾಕಷ್ಟು ಬಾರಿ ಎಚ್ಚರಿಕೆಯನ್ನು ನೀಡಿದ್ದ. ನಿನ್ನೆ ಕೂಡ ತೆಂಗಿನಕಾಯಿ ತೆಗೆದುಕೊಂಡು ಹೋಗುವಾಗ ತೋಟದ ಮಾಲೀಕ ಮಧುಗೆ, ಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಮಧು ಗುದ್ದಲಿಯಿಂದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾನೆ.
ಮದ್ಯ ಸೇವಿಸಿ ಊಟ-ತಿಂಡಿ ಮಾಡಿರದ ಕಾರಣ ಕುಮಾರ್ ನಿತ್ರಾಣಗೊಂಡು ತೀವ್ರ ರಕ್ತಸ್ರಾವದಿಂದ ಅಲ್ಲೆ ಬಿದ್ದಿದ್ದನು. ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಕುಮಾರ್ ಸಾವುನ್ನಪ್ಪಿದ್ದಾನೆ. ಸದ್ಯ ಸಖರಾಯಪಟ್ಟಣ ಪೋಲಿಸರು ಕೊಲೆ ಆರೋಪಿ ಮಧುನನ್ನು ಬಂಧಿಸಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












