ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯ ಕತ್ತಿಯಲ್ಲಿದ್ದ ಚಿನ್ನದ ಸರವನ್ನು ಕದಿಯಲು ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹೇಮಂತ್, ಮಹಿಳೆಯ ಸರ ಕದಿಯಲು ಯತ್ನಿಸಿದ ಯುವಕ.
ಇದನ್ನೂ ಓದಿ: ಮತ್ತೊಮ್ಮೆ ವಿದ್ಯುತ್ ದರ ಏರಿಕೆ; ರಾಜ್ಯದ ಜನತೆಗೆ ಕರೆಂಟ್ ಶಾಕ್

ಶಿಲ್ಪಾ ಎಂಬ ಮಹಿಳೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಹೇಮಂತ್ ಬೈಕ್ ರೈಡಿಂಗ್ ನಲ್ಲಿ ಇದ್ದಂತೆ ಮಹಿಳೆಯ ಕತ್ತಿನಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಕದಿಯಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಗಾಬರಿಗೊಂಡು ಅಲ್ಲಿದ್ದ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಇತ್ತ ಸ್ಥಳೀಯರು ಒಟ್ಟಾಗುತ್ತಿದ್ದಂತೆ ಸ್ಥಳದಿಂದ ಯುವಕ ಕಾಲ್ಕಿತ್ತಿದ್ದಾನೆ. ಕೂಡಲೇ ಸ್ಥಳೀಯರು ಪಕ್ಕದ ಗ್ರಾಮಕ್ಕೆ ಮಾಹಿತಿ ರವಾನಿಸಿದ್ದಾರೆ. ಅದರಂತೆ ಕುರುಕುಬಳ್ಳಿ ಗ್ರಾಮದಲ್ಲಿ ಯುವಕನನ್ನು ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!
ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ಐಫೋನ್ಗಳ ಡಿಸ್ಕೌಂಟ್ ಬೆಲೆ ಪ್ರಕಟ












