
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶಾಲೆಗೆ ಡ್ರಾಪ್ ಮಾಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ–ಶೃಂಗೇರಿ ಮಾರ್ಗದಲ್ಲಿ ನಡೆದಿದೆ.
65 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥಸ್ವಾಮಿ ಎಂಬಾತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುವ ವೇಳೆ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಭೀತಳಾದ ಬಾಲಕಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಜಿಗಿದಿದ್ದಾಳೆ. ಪರಿಣಾಮ ಗಾಯಗೊಂಡು ರಸ್ತೆಯಲ್ಲಿ ಬಿದ್ದ ಬಾಲಕಿಯ ಕಾಲಿನ ಮೇಲೆಯೇ ಆರೋಪಿ ಕಾರು ಹತ್ತಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.















