
ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯ ಏಕಲ️ವ್ಯ ಶಾಲೆಯ ಅಣಿ ದೂರದಲ್ಲಿ ಹಾಸನ ಮೂಲ️ದ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಆದರೆ 112 ಸಂಚಾರಿ ಪೊಲೀಸರು ಹಾಸನ ಮೂಲ️ದ ಮನು ಎಂಬುವನನ್ನು ರಕ್ಷಿಸಿ ಉಳಿಸಿದ್ದಾರೆ. ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದು ಚಾರ್ಮಾಡಿ ಘಾಟ್ ಬಳಿ ಏಕಲ️ವ್ಯ ಶಾಲೆಯ ಅಣಿ ಅಂತರದಲ್ಲಿ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲ️ಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ. ಈ ವೇಳೆ ಅಲ️ರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೂಡಿಗೆರೆ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ. ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಿ️ ಎಸ್. ಅಭಿಷೇಕ್, ದಿಲೀಪ್, ಸುಂಕ ಬೋವಿ, ಓಂಕಾರ ನಾಯ್ಕ್ ಭಾಗವಹಿಸಿದ್ದರು. ಪೊಲೀಸರ ಕಾರ್ಯವನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ













