
ಸಾಗರ: (ನ್ಯೂಸ್ ಮಲ್ನಾಡ್ ವರದಿ) ಸಿಗಂದೂರು ನೂತನ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಲೆಕ್ಕಪರಿಶೋಧಕರ ಕಚೇರಿಯ ಸಿಬ್ಬಂದಿ ಎನ್ನಲಾದ ಮೈಸೂರಿನ ಆಂಜನೇಯ (47) ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಸೇತುವೆಯ ಮೇಲೆ ನಿಂತಿದ್ದು, ಆತ್ಮಹತ್ಯೆಗೆ ಯತ್ನಿಸಿದ ವೇಳೆ ಎಂಜಿನಿಯರ್ ರಂಜೇಶ್ ರಕ್ಷಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿರುವ ಶಂಕೆ ಹಿನ್ನೆಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ













