ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಸಂಸದ ಶ್ರೇಯಸ್ ಪಟೇಲ್ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಶುಕ್ರವಾರ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ

ಹಾಸನ ಜಿಲ್ಲೆಯಲ್ಲಿನ ಮಾನವ ಮತ್ತು ವನ್ಯಜೀವಿ ಸಂಘರ್ಷ ಕಳೆದ 21 ವರ್ಷಗಳ ಅವಧಿಯಲ್ಲಿ ಹೆಚ್ಚಾಗಿದ್ದು, ಜಿಲ್ಲೆಯ ಬೇಲೂರು, ಸಕಲೇಶಪುರ ಮತ್ತು ಆಲೂರು ಭಾಗದಲ್ಲಿ 71 ಜನರು ಆನೆದಾಳಿಗೆ ಸಾವನ್ನಪ್ಪಿದ್ದಾರೆ. ಇದಕ್ಕೆ ತಕ್ಷಣವೇ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆಯಿದೆ.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ಅರಣ್ಯ ಪ್ರದೇಶದಲ್ಲಿ ಅವಶ್ಯಕ ನೀರಿನ ವ್ಯವಸ್ಥೆ, ಮೇವು ಒದಗಿಸುವ ಮರಗಳನ್ನು ನೆಡಬೇಕು ಮತ್ತು ಆನೆಗಳಿಗೆ ಪ್ರಿಯವಾದ ಬಿದಿರನ್ನು ಹೆಚ್ಚಾಗಿ ಬೆಳೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಸಂಸದ ಶ್ರೇಯಸ್ ಪಟೇಲ್ ಸಚಿವರಲ್ಲಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಶ್ರೇಯಸ್ ತಿಳಿಸಿದ್ದಾರೆ.
ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ












