ಶೃಂಗೇರಿ ತಾಲೂಕಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಮೆರವಣಿಗೆ ಮುಖಾಂತರ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಶೃಂಗೇರಿ ಪಿಎಸ್ ಐ ಅಭಿಷೇಕ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಶಾಲಾ*ಕಾಲೇಜು ಮಕ್ಕಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರೊಂದಿಗೆ ಮೆರವಣಿಗೆ ಸಾಗಿ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಲಾಯಿತು.



ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಅರಿವು ಕಾರ್ಯಕ್ರಮ:
ಕೊಪ್ಪ: ಇಲ್ಲಿನ ಪೊಲೀಸ್ ಠಾಣೆ ವತಿಯಿಂದ ಮಂಗಳವಾರ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಶಾಲಾ ಕಾಲೇಜು, ಬಸ್ ನಿಲ್ದಾಣ, ಆಟೊ ನಿಲ್ದಾಣ, ದೇವಸ್ಥಾನ, ಮಸೀದಿ ಇತ್ಯಾದಿ ಸ್ಥಳಗಳಲ್ಲಿ ಭಿತ್ತಿಪತ್ರ ಅಂಟಿಸಿ, ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಅವರು ಶಾಲೆಗಳಿಗೆ ತೆರಳಿ, ಮಾದಕ ವಸ್ತುಗಳು ಜೀವನವನ್ನು ನಾಶ ಮಾಡಲಿದ್ದು, ಅವುಗಳಿಂದ ದೂರವಿರಬೇಕು. ದುಶ್ಚಟಗಳಿಂದ ವಿದ್ಯಾರ್ಥಿಗಳು ದೂರ ಇದ್ದು, ಓದಿನ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು. ಆಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ತಿಳಿವಳಿಕೆ ನೀಡಿದರು.

ಕೊಪ್ಪ ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ಜಾಗೃತಿ ಕಾರ್ಯಕ್ರಮ:
ಕೊಪ್ಪ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಮಾದಕ ವಸ್ತುಗಳ ಸೇವನೆಯ ವಿರೋಧಿ ದಿನದ ಅಂಗವಾಗಿ ಕೊಪ್ಪದ ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್ಜಿಓ ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಜಾಥವನ್ನು ಹಮ್ಮಿಕೊಳ್ಳಲಾಯಿತು.
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನಜಾಗ್ರತಿ ಅರಿವು ಕಾರ್ಯಕ್ರಮ ನಡೆಸಿ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!
ಬಾಳೆಹೊನ್ನೂರು ಪೊಲೀಸ್ ಠಾಣಾ ವತಿಯಿಂದ ಮಾದಕ ವಸ್ತುಗಳ ಬಗ್ಗೆ ಅರಿವು:
ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕುರಿತು ಜನರಿಗೆ, ಶಾಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು-ಶಿಕ್ಷಕಿಯರು, ಪೊಲೀಸ್ ಠಾಣಾ ಸಿಬ್ಬಂದಿಗಳು ಮತ್ತು ಸ್ಥಳೀಯರಿಗೆ ಅರಿವು ಮೂಡಿಸಲಾಯಿತು.
ಬಾಳೆಹೊನ್ನೂರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮುಖಾಂತರ ಜನರಿಗೆ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಲಾಯಿತು.













