ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಹೆರಿಗೆಯಾಗಿ 2 ದಿನದಲ್ಲೇ ಮಗುವನ್ನು 1 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಘಟನೆ ಕಾನೂರು ಗ್ರಾಮ ಪಂಚಾಯಿತಿಯ ಹರಾವರಿ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಹರಾವರಿ ಗ್ರಾಮದ ರತ್ನ, ಸದಾನಂದ ದಂಪತಿಗಳು ಹಾಗೂ ಕೊಪ್ಪದ ನಿವೃತ್ತ ನರ್ಸ್ ಕುಸುಮ ಬಂಧಿತರು.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?

ಏನಿದು ಘಟನೆ:
ಕಾನೂರು ಗ್ರಾಮ ಪಂಚಾಯಿತಿಯ ಹರಾವರಿ ಗ್ರಾಮದ ಕೋಣನಗುಡ್ಡದ ರತ್ನ ಹೆರಿಗೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೇ 22 ರಂದು ಹೆಣ್ಣು ಮಗುವಿನ ಜನ್ಮ ನೀಡಿದ್ದು, ಮಗು ಹುಟ್ಟಿ 2 ದಿನಕ್ಕೆ ಕೊಪ್ಪದ ನಿವೃತ್ತ ನರ್ಸ್ ಕುಸುಮ ಎಂಬುವರ ಮೂಲಕ 1 ಲಕ್ಷ ರೂಪಾಯಿಗೆ ಒಪ್ಪಂದ ಮಾಡಿಕೊಂಡು ಸ್ವಲ್ಫ ಹಣ ಪಡೆದು ಮಗುವನ್ನು ಕಾರ್ಕಳದ ರಾಘವೇಂದ್ರ ಅವರಿಗೆ ಮಾರಾಟ ಮಾಡಿದ್ದರು.
ಈ ಬಗ್ಗೆ ಮಾಹಿತಿ ತಿಳಿದ ನರಸಿಂಹರಾಜಪುರ ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ಹಾಗೂ ಸಿಬ್ಬಂದಿಗಳು ತನಿಖೆ ನಡೆಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಾರ್ಕಳಕ್ಕೆ ಹೋಗಿ ಮಗುವನ್ನು ಸುರಕ್ಷಿತವಾಗಿ ತಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!
ಮಗು ಪಡೆದ ರಾಘವೇಂದ್ರ, ನಿವೃತ್ತ ನರ್ಸ್ ಕುಸುಮ ಅವರ ಸಹೋದರನಾಗಿದ್ದು, ತಮಗೆ ಮಕ್ಕಳು ಇಲ್ಲದೆ ಇರುವುದರಿಂದ ಸಾಕಲು ಮಗು ಪಡೆದಿದ್ದೇನೆ ಎಂದು ಮಗು ಪಡೆದ ಕಾರ್ಕಳದ ರಾಘವೇಂದ್ರ ಪೊಲೀಸರ ತನಿಖೆಯಲ್ಲಿ ತಿಳಿಸಿದ್ದಾನೆ.
ಇನ್ನು ರತ್ನ-ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ನರನ್ನ ಮಾರಾಟ ಮಾಡಿರೋ ಶಂಕೆ ವ್ಯಕ್ತವಾಗಿದ್ದು, ನರಸಿಂಹರಾಜಪುರ ಪೊಲೀಸರು ಪ್ರಕರಣ ದಾಖಲಿಸಿ ಮಗುವಿನ ತಂದೆ ಸದಾನಂದ, ತಾಯಿ ರತ್ನ ಹಾಗೂ ಮಗು ಮಾರಾಟಕ್ಕೆ ಮದ್ಯವರ್ತಿಯಾಗಿ ಕೆಲಸ ಮಾಡಿದ ನಿವೃತ್ತ ನರ್ಸ್ ಕುಸುಮ ಅವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ €18,750 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?













