ಬಂಟ್ವಾಳ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ದೇವರಮನೆ ಸಮೀಪದ ಗುಡ್ಡದಲ್ಲಿ ಶವವಾಗಿ ಪತ್ತೆಯಾದ ಮಂಚಿ ಮೂಲದ ಯುವಕನ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಂಟ್ವಾಳದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದೆ.
ಇದನ್ನೂ ಓದಿ; ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ

ಆಫ್ರಿದ್ ಹಾಗೂ ಇಶಾದ್ ಜಾಮೀನು ಪಡೆದ ಆರೋಪಿಗಳು, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಪೊಲೀಸರು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ. ಮೂಡಿಗೆರೆ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸೋಮೇಗೌಡ ಹಾಗೂ ಬಣಕಲ್ ಪಿಎಸ್ಐ ಜಂಬೂರಾಜ್ ಮಹಾಜನ್ ಅವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಇದನ್ನೂ ಓದಿ; ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
ಏನಿದು ಪ್ರಕರಣ:
ದೇವರಮನೆ ಸಮೀಪ ಜೂನ್ 8 ರಂದು ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿದ್ದು, ಅದು ಮಂಚಿ ಮೂಲದ ಯುವಕ ಸವಾದ್ನ ಮೃತದೇಹ ಎಂದು ಗುರುತಿಸಲಾಗಿತ್ತು. ಗಾಂಜಾ ವಿಚಾರಕ್ಕೆ ಸಂಬಂಧಿಸಿ ಕೊಲೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.
ಪ್ರಸ್ತುತ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಹೈ ವೋಲ್ವೇಜ್ ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಮರ
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಹೈ ವೋಲ್ವೇಜ್ ವಿದ್ಯುತ್ ತಂತಿತಾಗಿ ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಬೆಂಕಿ ಹತ್ತಿ ಧಗಧಗ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು ಭಾಗದಲ್ಲಿ ಭಾರೀ ಮಳೆ ಜೊತೆ ರಣಗಾಳಿ ಬೀಸುತ್ತಿದೆ. ಇನ್ನು ಭಾರೀ ಗಾಳಿ-ಮಳೆಯಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.












