ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಬೀಟೆ ಮರವನ್ನು ಕಡಿತಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಇದನ್ನೂ ಓದಿ; ಐಒಸಿಎಲ್ ನಲ್ಲಿ ಉದ್ಯೋಗಾವಕಾಶ; 1720 ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಇಲ್ಲಿದೆ ಮಾಹಿತಿ

ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೀಟೆ ಮರವನ್ನು ಕಡಿತಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಸಿದಿಕೆರೆಯ ಬಿ ಕಣಬೂರು ಗ್ರಾಮದ ಅಬೂಬಕರ್ (73) ಹಾಗೂ ಮಣಬೂರಿನ ಹುಯಿಗೆರೆ ಗ್ರಾಮದ ಕೃಷ್ಣಪ್ಪ (32) . ಬಂಧಿತ ಆರೋಪಿಗಳು.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 21.10.223
ಬಂಧಿತ ಆರೋಪಿಗಳಿಂದ ಮಾರುತಿ ಸುಜುಕಿ ಆಲ್ಟೊ ವಾಹನ ಹಾಗೂ ಒಂದು ಕಟ್ಟರ್ ಮಿಷನ್ ಜೊತೆಗೆ 2 ಬೀಟೆ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ವಿಫಲ- ಸುಧಾಕರ ಶೆಟ್ಟಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗ್ಯಾರಂಟಿಗಳೇ ಕಾರಣ. ಅದರೆ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಭರವಸೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಿಲ್ಲ. ಜೊತೆಗೆ ಗ್ಯಾರಂಟಿ ಅನುಷ್ಠಾನದಲ್ಲೇ ಬ್ಯುಸಿಯಾಗಿರುವ ಸರ್ಕಾರ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಮಾಡುವಂತೆ ಒತ್ತಾಯ:
ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ 2.13 ಕೋಟಿ ಮಹಿಳೆಯರು ನೋಂದಣಿಯಾಗಿದ್ದಾರೆ. ಮೊದಲ ಕಂತಿನಲ್ಲಿ 1 ಕೋಟಿ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂ. ನೀಡಲಾಗಿದೆ. ಉಳಿದವರಿಗೆ ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. 2 ನೇ ಕಂತಿನಲ್ಲಿ 80 ಲಕ್ಷ ಮಹಿಳೆಯರಿಗೆ ಮಾತ್ರ ಹಣ ಜಮೆಯಾಗಿದೆ. ಕೂಡಲೇ ಸರ್ಕಾರ ಸಮರ್ಪಕವಾಗಿ ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಮೂರು ಸಾವಿರ ಹಾಗೂ ಡಿಪ್ಲೊಮಾ ಮುಗಿಸಿದ ವಿದ್ಯಾರ್ಥಿಗಳಿಗೆ 1500 ರೂ. ಪ್ರತಿ ತಿಂಗಳು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯೋಜನೆ ಜಾರಿಗೊಳಿಸಿಲ್ಲ. ಇದರಿಂದ ವಿದ್ಯಾವಂತ ನಿರುದ್ಯೋಗಿಗಳು, ಹತಾಶರಾಗಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದರೆ ಗ್ರಾಮೀಣ ಪ್ರದೇಶದ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಖಾಸಗಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಈಗ ನಾವು ಐದು ಕೆ.ಜಿ. ಅಕ್ಕಿ ನೀಡುತ್ತೇವೆ, ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿ ನೀಡಲಿದೆ. ನಂತರ ಅಕ್ಕಿಯ ಬದಲು ಹಣ ಪಡಿತರ ಚೀಟಿದಾರರ ಖಾತೆಗೆ ಹಾಕುವುದಾಗಿ ಹೇಳಿದರು. ಮೊದಲ ತಿಂಗಳಲ್ಲಿ ಹಣ ಜಮೆ ಮಾಡಲಾಗಿದ್ದು, ಎರಡು ತಿಂಗಳಿಂದ ಹಣ ಜಮೆಯಾಗಿಲ್ಲ ಎಂದು ದೂರಿದರು.












