ಕಸ್ತೂರಿರಂಗನ್ ವರದಿ ವಿರೋಧಿಸಿ ಸೆ.10ರಂದು ಬಾಳೆಹೊನ್ನೂರು ಬಂದ್

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದ 7ನೇ ಅಧಿಸೂಚನೆ ವಿರೋಧಿಸಿ ಸೆಪ್ಟೆಂಬರ್ 10ರಂದು ಗುರುವಾರ ಬಾಳೆಹೊನ್ನೂರು ಪಟ್ಟಣ ಬಂದ್‌ಗೆ ರೈತ ಮತ್ತು ಸಾರ್ವಜನಿಕ ಹೋರಾಟ ಸಮಿತಿ ಕರೆ ನೀಡಿದೆ.

ಬಂದ್ ಅಂಗವಾಗಿ ಪಟ್ಟಣದ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡಲಾಗಿದ್ದು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿ ಮನವಿ ಮಾಡಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆ ಹಾಗೂ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ.

ಪಶ್ಚಿಮ ಘಟ್ಟದ ಅರಣ್ಯ, ಜೀವವೈವಿಧ್ಯ ಹಾಗೂ ಪರಿಸರ ಸಂರಕ್ಷಣೆಯ ಉದ್ದೇಶ ಹೊಂದಿರುವ ಅಧಿಸೂಚನೆಯಿಂದ ಮಲೆನಾಡಿನ ರೈತರು, ಕಾಫಿ ಬೆಳೆಗಾರರು, ತೋಟಗಾರರು ಹಾಗೂ ಗ್ರಾಮೀಣ ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೋರಾಟ ಸಮಿತಿ ಆತಂಕ ವ್ಯಕ್ತಪಡಿಸಿದೆ.

ಸ್ಥಳೀಯ ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಪರಿಗಣಿಸಿ 7ನೇ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಸಮಿತಿ ಒತ್ತಾಯಿಸಿದೆ. ಬಂದ್ ಹಾಗೂ ಪ್ರತಿಭಟನೆಗೆ ವ್ಯಾಪಾರಸ್ಥರು ಮತ್ತು ನಾಗರಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.