
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರು–ಚಿಕ್ಕಮಗಳೂರು ಮುಖ್ಯರಸ್ತೆ ಅಗಲೀಕರಣ ಹಾಗೂ ಅಪಾಯಕಾರಿ ತಿರುವುಗಳನ್ನು ನೇರಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ ಶಾಸಕರು ಹಾಗೂ ಅರಣ್ಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಶಾಸಕರ ನೇತೃತ್ವದಲ್ಲಿ DFO, RFO, ACF ಹಾಗೂ ಪೊಲೀಸ್ PSI ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ಕೈಗೊಳ್ಳಬೇಕಾದ ಪ್ರದೇಶಗಳನ್ನು ಪರಿಶೀಲಿಸಿದರು.

ಈ ವೇಳೆ ರಸ್ತೆ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ಅಪಘಾತ ಸಾಧ್ಯತೆ ಇರುವ ಅಪಾಯಕಾರಿ ತಿರುವುಗಳನ್ನು ನೇರಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಕಾಮಗಾರಿಗೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಕೈಗೊಂಡು, ಪರಿಣಾಮಕಾರಿಯಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸುವ ಕುರಿತು ಪರಿಶೀಲನೆ ನಡೆಸಲಾಯಿತು.
ರಸ್ತೆ ಅಗಲೀಕರಣ ಮತ್ತು ತಿರುವುಗಳ ನೇರಗೊಳಿಸುವ ಕಾಮಗಾರಿ ಪೂರ್ಣಗೊಂಡಲ್ಲಿ ಬಾಳೆಹೊನ್ನೂರು–ಚಿಕ್ಕಮಗಳೂರು ಮಾರ್ಗದಲ್ಲಿ ಸಂಚಾರ ಮತ್ತಷ್ಟು ಸುಗಮವಾಗುವುದರ ಜೊತೆಗೆ ರಸ್ತೆ ಸುರಕ್ಷತೆ ಹೆಚ್ಚಲಿದೆ ಎಂದು ನಿರೀಕ್ಷಿಸಲಾಗಿದೆ. (ವರದಿ: ಶಶಿ ಬೆತ್ತದಕೊಳಲು)












